ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಹೀಗಾಗಿ ಎರಡು ಗಂಟೆಗಳ ಬಳಿಕ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಬಂದಿಳಿದ್ದಾರೆ ಎಂದು ವರದಿಯಾಗಿದೆ.
ಟೆಕ್ ಆಫ್ ಆಗಬೇಕಿದ್ದ ವಿಮಾನದಲ್ಲಿ ಪ್ರಧಾನಿ ಮೋದಿ ಕುಳಿತುಕೊಂಡಿದ್ದರು. ಆದರೆ ತಾಂತ್ರಿಕ ದೋಷದ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ದಿಯೋಘರ್‌ನಲ್ಲಿ ವಿಮಾನವನ್ನು ನಿಲ್ಲಿಸಲು ನಿರ್ಧರಿಸಲಾಯಿತು. ಬಳಿಕ ವಿಮಾನದಲ್ಲಿನ ದೋಷವನ್ನು ಸರಿಪಡಿಸುವ ಪ್ರಯತ್ನವೂ ನಡೆಯಿತು. ಬಳಿಕ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಬಂದಿಳಿದ್ದಾರೆ .
ಬುಡಕಟ್ಟು ಜನಾಂಗದ ಪ್ರತಿನಿಧಿ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಮತ್ತು ನ.20ರಂದು ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ಪ್ರಚಾರ ಸಭೆಗಳನ್ನು ಉದ್ದೇಶಿ ಮಾತನಾಡಲು ಇಲ್ಲಿಗೆ ಬಂದಿದ್ದರು.