Monday, August 8, 2022

Latest Posts

ತಾಂತ್ರಿಕ ದೋಶ: ಟೇಕ್ ಆಫ್‌ ಆದ ಆರ್ಧ ಗಂಟೆಯಲ್ಲಿ ಕೆಳಗಿಳಿದ ಏರ್‌ ಇಂಡಿಯಾ ವಿಮಾನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇಂದು ತಿರುವನಂತಪುರಂನಿಂದ ಶಾರ್ಜಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತಾಂತ್ರಿಕ ದೋಷದಿಂದಾಗಿ ಟೇಕ್‌ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಪಸ್ ಆಗಿದೆ.

ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 170 ಪ್ರಯಾಣಿಕರಿದ್ದರು. ಟೇಕ್ ಆಫ್ ಆದ ಅರ್ಧ ಗಂಟೆಯಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿದ್ದು, ಅದನ್ನು  ಪೈಲಟ್‌ಗಳು ಗುರುತಿಸಿದರು ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌(ಎಐಇ) ವಕ್ತಾರರು ಮಾಹಿತಿ ನೀಡಿದ್ದಾರೆ.

ವಿಮಾನ ವನ್ನು ಸರಕ್ಷಿತವಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ನಂತರ ಪ್ರಯಾಣಿಕರಿಗೆ ಬೇರೆ ವಿಮಾನ ವ್ಯವಸ್ಥೆ ಮಾಡಿ ಕಳುಹಿಸಲಾಯಿತು ಎಂದು ಎಐಇ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss