ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಂಗ್ ಕಾಂಗ್ ನಿಂದ ಸೋಮವಾರ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಪೈಲಟ್, ತಾಂತ್ರಿಕ ದೋಷದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಮಧ್ಯದ್ಯದಲ್ಲಿಯೇ ವಾಪಸ್ ಆಗಿ ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಮಾನವು ಹಾಂಗ್ ಕಾಂಗ್ ನಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ವಿಮಾನವು ಹಾಂಗ್ ಕಾಂಗ್ ನಿಂದ ಬೆಳಗ್ಗೆ 9.50ಕ್ಕೆ(ಭಾರತೀಯ ಕಾಲಮಾನ) ಟೇಕಾಫ್ ಆಯಿತು ಮತ್ತು ದೆಹಲಿಯಲ್ಲಿ ಇಂದು ಮಧ್ಯಾಹ್ನ 12: 20ಕ್ಕೆ ಲ್ಯಾಂಡ್ ಆಗಬೇಕಿತ್ತು.