ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂದಾಖಲೆಗಳಲ್ಲಿ ತಾಂತ್ರಿಕ ದೋಷಗಳಿವೆ, ಅದನ್ನು ಬಗೆಹರಿಸದಿದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬಳ್ಳಾರಿ ಜಿಲ್ಲೆಯ ಕೃಷ್ಣಾನಗರ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರವು ಕೃಷ್ಣನಗರವನ್ನು ಕಂದಾಯ ಗ್ರಾಮ ಎಂದು ಘೋಷಿಸಿದ ನಂತರ, ಕೃಷಿ ಭೂಮಿಯ ಹಕ್ಕುಗಳು, ಹಿಡುವಳಿ ಮತ್ತು ಬೆಳೆಗಳ ದಾಖಲೆಗಳು ಸೇರಿದಂತೆ ಎಲ್ಲಾ ಭೂ ದಾಖಲೆಗಳನ್ನು ಕರ್ನಾಟಕ ರಾಜ್ಯ ಎಂಬ ಹೆಸರಿನಲ್ಲಿ ಮುದ್ರಿಸಲಾಗಿದ್ದು, ಗ್ರಾಮಸ್ಥರು ಹೊಸ ಜಮೀನುಗಳನ್ನು ಖರೀದಿಸಲು ಅಥವಾ ಮಾರಾಟ ಮಾಡಲು ಅಡ್ಡಿಯುಂಟಾಗಿದೆ.
ಇದರಿಂದಾಗಿ ಗ್ರಾಮಸ್ಥರಿಗೆ ಹಲವು ಬಾರಿ ಕಿರಿಕಿರಿ ಆಗಿದ್ದು, ಸರಿ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೂ ಯಾರೂ ಗಮನ ಹರಿಸದ ಕಾರಣ ಗ್ರಾಮಸ್ಥರು ಸಿಟ್ಟಿಗೆದ್ದಿದ್ದು, ಲೋಕಸಭೆ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.