Sunday, October 12, 2025

ಹೊಸ ಮೆಟ್ರೋ ಲೈನ್‌ನಲ್ಲಿ ಟೆಕ್ನಿಕಲ್ ಟ್ರಬಲ್; ಪ್ರಯಾಣಿಕರಿಗೆ 25 ನಿಮಿಷ ಕಾಯುವ ಶಿಕ್ಷೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋದ ಹೊಸದಾಗಿ ಆರಂಭಗೊಂಡಿರುವ ಹಳದಿ ಮಾರ್ಗದ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ತಾಂತ್ರಿಕ ದೋಷದ ಪರಿಣಾಮವಾಗಿ, ಪ್ರಸ್ತುತ ಈ ಮಾರ್ಗದಲ್ಲಿ ಮೆಟ್ರೋ ರೈಲುಗಳು ಪ್ರತಿ 25 ನಿಮಿಷಕ್ಕೊಮ್ಮೆ ಮಾತ್ರ ಸಂಚರಿಸುತ್ತಿವೆ. ಇದರಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮನವಿ ಮಾಡಿದೆ.

ಆರ್‌ವಿ ಕಾಲೇಜ್‌ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾಗುವ 19.15 ಕಿ.ಮೀ ಉದ್ದದ ಈ ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳಿವೆ ಮತ್ತು ಇದು ನಮ್ಮ ಮೆಟ್ರೋದ ಇತರೆ 3 ಮಾರ್ಗಗಳಿಗೆ ಸಂಪರ್ಕ ಕಲ್ಪಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರು ಇದೇ ಆಗಸ್ಟ್‌ 10 ರಂದು ಈ ಹಳದಿ ಮಾರ್ಗದ ಮೆಟ್ರೋ ಸೇವೆಗೆ ಚಾಲನೆ ನೀಡಿದ್ದರು. ಪ್ರಸ್ತುತ, ಒಟ್ಟು ನಾಲ್ಕು ರೈಲುಗಳು ಸಂಚಾರ ನಡೆಸುತ್ತಿದ್ದು, ಶೀಘ್ರದಲ್ಲಿಯೇ 5ನೇ ರೈಲನ್ನು ಸೇರ್ಪಡೆಗೊಳಿಸುವ ಸಾಧ್ಯತೆ ಇದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

error: Content is protected !!