ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದು ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಶಂಕರ್ (38) ಬಂಧಿತ ಲಾರಿ ಚಾಲಕ. ಹಲಸೂರು ಗೇಟ್ ಸಂಚಾರ ಪೊಲೀಸರಿಂದ ಶಿವಶಂಕರ್ ಬಂಧನವಾಗಿದೆ. ನಿನ್ನೆ ಸಂಜೆ ವೇಳೆಗೆ ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ 9 ಗಂಟೆಗೆ ಕೆ ಆರ್ ಸರ್ಕಲ್ ಬಳಿ ಕಸದ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಪ್ರಶಾಂತ್ (25) ಮತ್ತು ಶಿಲ್ಪ (25) ಮೃತಪಟ್ಟಿದ್ದರು. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿ ನಿವಾಸಿ. ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ ವೆಂಕಟರಾಮ ರೆಡ್ಡಿ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.