ಯುವತಿ ಮೇಲೆ ಅತ್ಯಾಚಾರವೆಸಗಿ ಅಶ್ಲೀಲ ಚಿತ್ರ ಸಾಮಾಜಿಕ ತಾಣಗಳಲ್ಲಿ ಅಪ್‌ಲೋಡ್:‌ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ 22 ವರ್ಷದ ಯುವಕ ಮತ್ತು ಇತರ ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಆಕೆಗೆ ಕಿರುಕುಳ ನೀಡಿದ ಆತನ ತಾಯಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಹದಿಹರೆಯದ ಯುವತಿ ಮೇ ತಿಂಗಳಲ್ಲಿ ಭೋಪಾಲ್‌ಗೆ ಹೋಗಿದ್ದರು. ಆ ವೇಳೆ ಆರೋಪಿ ಅಭಿಷೇಕ್ ಕುರಿಲ್ ನನ್ನು ಭೇಟಿಯಾಗಿದ್ದಳು. ಆ ವೇಳೆ ಯುವತಿಗೆ ಪ್ರೀತಿ ಹೆಸರಿನಲ್ಲಿ ವಂಚಿಸಿದ್ದ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ.
ತಾಯಿ ಮತ್ತು ಮಗನ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರ ಪತ್ತೆಕಾರ್ಯ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯ ಅತ್ತೆಯ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಆ ಇಬ್ಬರು ಬಾಲಕಿಗೆ ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ. ಆರೋಪಿ ಆಕೆಯ ಮೊಬೈಲ್ ಕದ್ದು ಆಕೆಯ ಅಶ್ಲೀಲ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!