ಹೆಣ್ಣುಮಕ್ಕಳು ಸಣ್ಣ ವಯಸ್ಸಿನಲ್ಲಿ ಗರ್ಭಧಾರಣೆ ಸೂಕ್ತವಲ್ಲ: ತಜ್ಞರ ಎಚ್ಚರಿಕೆ ಏನು..?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಯಸ್ಸಲ್ಲದ ವಯಸ್ಸಿನಲ್ಲಿ ಮದುವೆ ಮಾಡುವುದು(ಬಾಲ್ಯ ವಿವಾಹ) ಅವರ ಜೀವನ ನರಕ ಆಗುವುದು ಎರಡೂ ಒಂದೇ. ಮಕ್ಕಳನ್ನು ಹೆರುವ ವಯಸ್ಸಿಲ್ಲದಿದ್ರೂ ಮದುವೆ ಮಾಡಿ ಅವರ ಜೀವನವನ್ನು ನರಕಕ್ಕೆ ತಳ್ಳುವ ಮುನ್ನ ಒಮ್ಮೆ ಯೋಚಿಸಿ. ಸಂತಾನೋತ್ಪತ್ತಿ ಮತ್ತು ಲೈಂಗಿಕ ಆರೋಗ್ಯದ ಬಗ್ಗೆ ಸರಿಯಾದ ತಿಳುವಳಿಕೆಯ ಕೊರತೆಯಿಂದಾಗಿ ಅನೇಕ ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಗರ್ಭ ಧರಿಸುತ್ತಾರೆ.

ಇಂತಹ ವಿಷಮ ಪರಿಸ್ಥಿತಿ ಹೆಣ್ಣುಮಕ್ಕಳಿಗೆ ಜೀವಮಾನವಿಡೀ ದೈಹಿಕ, ಮಾನಸಿಕ ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಚಿಕ್ಕ ವಯಸ್ಸಿಗೆ ಗರ್ಭವತಿಯಾಗುವುದರಿಂದ ಹೆಣ್ಣುಮಕ್ಕಳು ಅನಿಮಿಯಾಗೆ ಒಳಗಾಗುತ್ತಾರೆ. ಇದರ ಜೊತೆಗೆ ಅಧಿಕ ರಕ್ತದೊತ್ತಡ, ದೈಹಿಕ ಒತ್ತಡ ಮತ್ತು ಮಾನಸಿಕ ಕಿರುಕುಳದಂತಹ ಸಮಸ್ಯೆಗಳು ಉದ್ಭವಿಸಬಹುದು.

ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಲ್ಲಿ ಜನಿಸಿದ ಶಿಶುಗಳು ಕೂಡಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕಡಿಮೆ ತೂಕ, ಉಸಿರಾಟದ ತೊಂದರೆ, ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆ ಕಂಡುಬರುತ್ತದೆ. ಕೆಲವೊಮ್ಮೆ ಹುಟ್ಟಿದ ಕೆಲವೇ ಗಂಟೆಗಳಲ್ಲಿ ಮಕ್ಕಳು ಸಾವನ್ನಪ್ಪುತ್ತವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!