ಕಾಂತಾರ ಗೆಟ್ ಆಪ್ ನಲ್ಲಿ ಬಂದ ತಹಶೀಲ್ದಾರ್​: ಅಚ್ಚರಿಗೊಂಡ ಜಿಲ್ಲಾಧಿಕಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವನ್ನೇ ಕನ್ನದತ್ತ ತಿರುಗಿನೋಡುವಂತೆ ಮಾಡಿದ ಸಿನಿಮಾ ‘ಕಾಂತಾರ’. ಹೊರ ರಾಜ್ಯಗಳಲ್ಲೂ ಈ ಸಿನಿಮಾ ಸೂಪರ್​ ಹಿಟ್​ ಆಗಿದೆ.

ತೆಲುಗಿಗೆ ಡಬ್​ ಆಗಿ ತೆರೆಕಂಡ ‘ಕಾಂತಾರ’ ಅಲ್ಲಿಯೂ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಅಷ್ಟೇ ಅಲ್ಲದೇ, ರಿಷಬ್​ ಶೆಟ್ಟಿ ಪಾತ್ರ ಎಲ್ಲರ ಮನೆಮಾತಾಗಿದೆ. ಅದಕ್ಕೆ ಸ್ಫಷ್ಟ ಉದಾಹರಣೆ ಅಲ್ಲಿನ ತಹಶೀಲ್ದಾರರೊಬ್ಬರು ‘ಕಾಂತಾರ’ ರೀತಿ ವೇಷ ಹಾಕಿಕೊಂಡಿರುವುದು.

ಆಂದ್ರದ ಗುಂಟೂರಿನ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜಯನಗರಂ ಜಿಲ್ಲೆಯ ತಹಶೀಲ್ದಾರ್​ ಪ್ರಸಾದ್​ ರಾವ್​ ಅವರು ‘ಕಾಂತಾರ’ ಸಿನಿಮಾದ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಅವರನ್ನು ಈ ಅವತಾರದಲ್ಲಿ ಕಂಡು ಅಲ್ಲಿದ್ದ ಎಲ್ಲರಿಗೂ ಅಚ್ಚರಿ ಆಗಿದೆ. ಈ ವೇಳೆ ಅವರು ‘ಕಾಂತಾರ’ ಚಿತ್ರದ ಡೈಲಾಗ್ ಕೂಡ ಹೇಳಿದ್ದಾರೆ ಎನ್ನಲಾಗಿದೆ.
ತಹಶೀಲ್ದಾರ್​ ಪ್ರಸಾದ್​ ರಾವ್​ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ . ಹಾಗಾಗಿ ಅವರು ಈ ಕಾರ್ಯಕ್ರಮಕ್ಕೆ ‘ಕಾಂತಾರ’ ಚಿತ್ರದ ರೀತಿ ವೇಷ ಹಾಕಿಕೊಂಡು ಬಂದಿದ್ದರು. ಅವರನ್ನು ನೋಡಿ ಜಿಲ್ಲಾಧಿಕಾರಿಗೂ ಅಚ್ಚರಿ ಆಗಿದೆ. ತಹಶೀಲ್ದಾರ್​ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.

ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ನಿರ್ಮಾಣ ವಾದ ‘ಕಾಂತಾರ’ ಸಿನಿಮಾ ಹಿಂದಿಯಲ್ಲಿ 70 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಎಲ್ಲ ಭಾಷೆಗಳ ಕಲೆಕ್ಷನ್​ ಸೇರಿಸಿದರೆ 350 ಕೋಟಿ ರೂಪಾಯಿ ದಾಟಿದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!