Thursday, November 6, 2025

ʼಬಿಹಾರದಲ್ಲಿ ಬದಲಾವಣೆಗಾಗಿ ತೇಜಸ್ವಿ ಯಾದವ್ ಸಿಎಂ ಆಗಬೇಕುʼ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರಿ ಮತದಾರರಿಗೆ ವೇತನ ಸಹಿತ ರಜೆ ನೀಡುವಂತೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮೊದಲ ಹಕ್ಕು.

ನಮ್ಮ ಮತ ನಮ್ಮ ಹಕ್ಕು. ಹೀಗಾಗಿ ನಮ್ಮ ದೇಶದಲ್ಲಿ ನಮ್ಮ ಜನ ಮತದಾನ ಮಾಡಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಎಲ್ಲಾ ಸಂಸ್ಥೆಗಳು ಬಿಹಾರದ ಮತದಾರರಿಗೆ ವತನ ಸಹಿತ ರಜೆ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಬಿಹಾರ ಚುನಾವಣೆಯಲ್ಲಿ ಆರ್ ಜೆಡಿ ಹಾಗೂ ಕಾಂಗ್ರೆಸ್ ಬಹಳಷ್ಟು ಆತ್ಮ ವಿಶ್ವಾಸದಲ್ಲಿದೆ ಎಂದು ಕೇಳಿದಾಗ, ಬಿಹಾರದ ಜನತೆ ಬದಲಾವಣೆ ಬಯಸಿದ್ದಾರೆ. ಹೀಗಾಗಿ ನಾವು ಆತ್ಮವಿಶ್ವಾಸದಲ್ಲಿದ್ದೇವೆ. ಇದೇ ದೇಶದ ಒತ್ತಾಸೆಯಾಗಿದೆ ಎಂದು ತಿಳಿಸಿದರು.

error: Content is protected !!