ಗಾಯಕಿ ಶಿವಶ್ರೀ ಸ್ಕಂದ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ, ಇಲ್ಲಿದೆ ಫೊಟೋಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಇಂದು ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿದೆ. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆದಿದೆ.

ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ಶುಭ ಹಾರೈಸಿದ್ದಾರೆ.

ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!