ಭರ್ಜರಿ ಗೆಲುವು: ಕುಮಾರಸ್ವಾಮಿ ಭೇಟಿ ಮಾಡಿ ಧನ್ಯವಾದ ತಿಳಿಸಿದ ತೇಜಸ್ವಿ ಸೂರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ತೇಜಸ್ವಿ ಸೂರ್ಯ ಅವರು ಭರ್ಜರಿ ಗೆಲುವು ಸಾಧಿಸಿದ್ದು,  ಗೆಲುವಿಗೆ ಸಹಕಾರ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ‌. ಕುಮಾರಸ್ವಾಮಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಜೆಪಿ ನಗರದ ಹೆಚ್​ಡಿಕೆ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಸಂಸದ ತೇಜಸ್ವಿ ಸೂರ್ಯ, ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಶಾಲು ಹಾಕಿ ಹೂಗುಚ್ಛ ನೀಡಿ ಧನ್ಯವಾದ ಸಲ್ಲಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ತೇಜಸ್ವಿ ಸೂರ್ಯ ಪರವಾಗಿ ಹೆಚ್​ಡಿಕೆ ಮತಯಾಚನೆ ಮಾಡುವುದರ ಜೊತೆಗೆ ಜೆಡಿಎಸ್ ಸಹ ಬೆಂಬಲ ನೀಡಿತ್ತು. ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜಯ ಗಳಿಸಿದ ಕುಮಾರಸ್ವಾಮಿ ಅವರಿಗೂ ತೇಜಸ್ವಿ ಸೂರ್ಯ ಶುಭಾಶಯ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!