ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ: ರಾಜನಾಥ್ ಸಿಂಗ್, ಸಿಎಂ, ಡಿಸಿಎಂ ಸಹಿತ ಗಣ್ಯರಿಂದ ಶುಭಹಾರೈಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್‌ ಅವರ ಆರತಕ್ಷತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು.

ಕೇಂದ್ರದ ಸಚಿವರು,ಬಿಜೆಪಿ ನಾಯಕರು , ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜ್ಯ ನಾಯಕರು ಸೇರಿ ಅನೇಕ ಗಣ್ಯರು ಶುಭಹಾರೈಸಿದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್,ಯುಡಿಯೂಪ್ಪ ,ಅಣ್ಣಾಮಲೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಆರ್ ಅಶೋಕ್, ಶೋಭಾ ಕರಂದ್ಲಾಜೆ , ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಜಿ.ಪರಮೇಶ್ವರ್‌, ಸಚಿವ ಜಮೀರ್‌ ಅಹ್ಮದ್‌ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನವದಂಪತಿಗೆ ವಿಶ್‌ ಮಾಡಿದರು.

ಮಾರ್ಚ್‌ 5 ಮತ್ತು 6 ರಂದು ತೇಜಸ್ವಿ ಸೂರ್ಯ ವಿವಾಹ ಸಮಾರಂಭ ಬೆಂಗಳೂರು ಕನಕಪುರ ರೆಸಾರ್ಟ್‌ನಲ್ಲಿ ನಡೆದಿತ್ತು. ಇದಕ್ಕೆ ಕುಟುಂಬ ಸದಸ್ಯರು, ಆಪ್ತ ವಲಯದ ಸ್ನೇಹಿತರು, ರಾಜಕೀಯ ಗಣ್ಯರು ಸಾಕ್ಷಿಯಾಗಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!