ತೇಜಸ್ವಿನಿ ಅನಂತಕುಮಾರ್ ಜೊತೆ ರಾಜಕೀಯ ಚರ್ಚೆ ಮಾಡಿಲ್ಲ, ದಯಮಾಡಿ ನಾನು ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಕೇಂದ್ರ ಸಚಿವ ದಿ.ಅನಂತ್​ ಕುಮಾರ್ ಪತ್ನಿ, ತೇಜಸ್ವಿನಿ ಅನಂತಕುಮಾರ್ (Tejaswini Ananth Kumar) ಅವರ ಜತೆ ರಾಜಕೀಯ ಚರ್ಚೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೋಮವಾರ ಕ್ಷಮೆಯಾಚನೆ ಮಾಡಿದ್ದಾರೆ.

ತೇಜಸ್ವಿನಿ ಅನಂತಕುಮಾರ್‌ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ನನ್ನ ಹೆಸರಿನಲ್ಲಿ ಆ ರೀತಿ ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ (Twitter) ಪೋಸ್ಟ್ ಮಾಡಿದವರನ್ನು ಕೂಡಲೇ ತೆಗೆದುಹಾಕುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ತೇಜಸ್ವಿನಿ ಅನಂತಕುಮಾರ್ ಅವರು ಸೋಮವಾರ ಮಧ್ಯಾಹ್ನ ಡಿಕೆ ಶಿವಕುಮಾರ್ ಅವರನ್ನು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅದಾದ ನಂತರ ಡಿಕೆ ಶಿವಕುಮಾರ್ ಅವರ ಟ್ವಿಟರ್ ಹ್ಯಾಂಡಲ್​​ನಲ್ಲಿ, ಫೋಟೊ ಸಹಿತ ಮಾಹಿತಿ ನೀಡಲಾಗಿತ್ತು.

ನಾನು ಆ ಹೆಣ್ಣು ಮಗಳ ಜೊತೆ ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ. ದಯಮಾಡಿ ನಾನು ಕ್ಷಮೆ ಕೇಳುತ್ತೇನೆ. ದಿವಂಗತ ಅನಂತಕುಮಾರ್‌ ಕಾರ್ಯಕ್ರಮದ ಬಗ್ಗೆ ಅವರು ನನ್ನ ಜೊತೆ ಚರ್ಚಿಸಿದ್ದಾರೆ. ರಾಜಕೀಯ ಚರ್ಚಿಸಲಾಗಿತ್ತು ಎಂದು ಟ್ವೀಟ್‌ ಮಾಡಿದ್ರೆ, ಅದಕ್ಕೆ ಕ್ಷಮೆಯಿರಲಿ. ನನ್ನ ಹೆಸರಲ್ಲಿ ಟ್ವೀಟ್ ಮಾಡಿದವರನ್ನು ಕೂಡಲೇ ತೆಗೆದು ಹಾಕುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಹಾಗೂ ತೇಜಸ್ವಿನಿ ಅನಂತ ಕುಮಾರ್ ಮಾತುಕತೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಸೃಷ್ಟಿಸಿತ್ತು. ಇದಕ್ಕೆ ಡಿಕೆ ಶಿವಕುಮಾರ್ ಅವರ ಟ್ವೀಟ್​​ ಮತ್ತಷ್ಟು ಪುಷ್ಟಿ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!