ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ಮನೆ-ಮನೆ ಜ್ವರ ಸಮೀಕ್ಷೆಗೆ ಮುಂದಾದ ತೆಲಂಗಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚಲು ತೆಲಂಗಾಣ ಸರ್ಕಾರ ಇಂದಿನಿಂದ ಮನೆ-ಮನೆ ಜ್ವರ ಸಮೀಕ್ಷೆಗೆ ಮುಂದಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪೌರಾಡಳಿತ, ನಗರಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಇಂದಿನಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಈ ಮೂಲಕ ಕೋವಿಡ್ ರೋಗಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಲಾಗುವುದು.
ಇನ್ನು ಸಮೀಕ್ಷೆಯಿಂದ ವೈದ್ಯಕೀಯ ಸಿಬ್ಬಂದಿ ಔಷಧಿ ಕಿಟ್‌ಗಳನ್ನು ಪೂರೈಸುತ್ತಾರೆ. ಕೋವಿಡ್‌ನಿಂದ ಬಳಲುತ್ತಿರುವವರನ್ನು ತಕ್ಷಣವೇ ಪ್ರತ್ಯೇಕಿಸುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!