ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ವಿಧಾನಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆ ಜೋರಾಗಿ ಶುರುವಾಗಿದ್ದು, ಈ ನಡುವೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದ್ದಾರೆ.
‘ಅಕ್ಟೋಬರ್ 16ರಂದು ವಾರಂಗಲ್‌ನಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತೇವೆ.ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪಕ್ಷದಿಂದ ಹೊರಹಾಕಲಾಗುವುದು’ ಎಂದು ಹೇಳಿದ್ದಾರೆ.
ಕಾಮರೆಡ್ಡಿ ಮತ್ತು ಗಜ್ವೇಲ್ ಕ್ಷೇತ್ರಗಳಿಂದ ಸಿಎಂ ಕೆಸಿಆರ್ ಸ್ಪರ್ಧಿಸಲಿದ್ದು, ಅವರು ಪುತ್ರ, ಸಚಿವ ಕೆ.ಟಿ. ರಾಮರಾವ್ ಅವರು ಸಿರ್ಸಿಲ್ಲಾದಿಂದ ಕಣಕ್ಕಿಳಿಯಲಿದ್ದಾರೆ.
119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆ ಚುನಾವಣೆಗೆ ಇನ್ನಷ್ಟೇ ದಿನಾಂಕ ಘೋಷಣೆಯಾಗಬೇಕಿದೆ.