ತೆಲಂಗಾಣ ಚುನಾವಣೆ: ಕಾಂಗ್ರೆಸ್‌ನಿಂದ 55 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ 119 ವಿಧಾನಸಭಾ ಕ್ಷೇತ್ರಗಳಿದ್ದು, ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷ 55 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಭಾನುವಾರ ಬೆಳಗ್ಗೆ ಬಿಡುಗಡೆ ಮಾಡಿದರು. ಮೊದಲ ಪಟ್ಟಿಯಲ್ಲಿ 12 ಮಂದಿ ಎಸ್.ಸಿ ಕಾಂಗ್ರೆಸ್ ವರಿಷ್ಠರು ಎರಡು ಎಸ್ಟಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಇನ್ನುಳಿದ ಕ್ಷೇತ್ರಗಳ ಪಟ್ಟಿಯನ್ನು ಇದೇ 25ರೊಳಗೆ ಪ್ರಕಟಿಸಲು ಕಾಂಗ್ರೆಸ್ ನಾಯಕತ್ವ ಕಸರತ್ತು ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!