SSLC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಜೆಪಿ ಎಂಪಿ ಬಂಧನ : ಸಿಎಂ ವಿರುದ್ಧ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

10ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಅವರನ್ನು ಬಂಧಿಸಲಾಗಿದೆ. ಬಂಧನದ ವೇಳೆ ಕರೀಂನಗರದಲ್ಲಿರುವ ಸಂಸದ ಸಂಜಯ್ ಅವರ ನಿವಾಸದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾರ್ಯಕರ್ತರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ತಮ್ಮ ನಾಯಕನನ್ನು ಏಕೆ ಬಂಧಿಸಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಸಿಐ ದಾಮೋದರ್ ಅವರನ್ನು ಪ್ರಶ್ನಿಸಿದರು. ಏತನ್ಮಧ್ಯೆ, ಸಂಜಯ್‌ಗೆ 151 ಸಿಆರ್‌ಪಿಸಿ ನೋಟಿಸ್‌ಗಳನ್ನು ನೀಡಲಾಗಿದೆ. ಬಂಡಿ ಸಂಜಯ್‌ ಅವರನ್ನು ನಲ್ಗೊಂಡ ಜಿಲ್ಲೆಯ ಬೊಮ್ಮಲರಾಮರಂ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಗಿದೆ. ಬಿಜೆಪಿ ಕಾರ್ಯಕರ್ತರು, ಮುಖಂಡರು ಪೊಲೀಸ್ ಠಾಣೆಗೆ ಭಾರೀ ಸಂಖ್ಯೆಯಲ್ಲಿ ಪೊಲೀಸ್‌ ಠಾಣೆ ಬಳಿ ಬರುತ್ತಿದ್ದಾರೆ. ಬಂಡಿ ಸಂಜಯ್ ಅವರ ಮನೆಗೆ ಮಧ್ಯರಾತ್ರಿ ನುಗ್ಗಿ ಅಕ್ರಮವಾಗಿ ಬಂಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಲೋಕಸಭೆ ಸ್ಪೀಕರ್ ಕಚೇರಿಗೆ ದೂರು ನೀಡಲಾಗುವುದು ಎಂದರು.

ಬಂಡಿ ಸಂಜಯ್ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕರೀಂನಗರದಲ್ಲಿ ಸಿಎಂ ಕೆಸಿಆರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಬಂಡಿ ಸಂಜಯ್ ಬಂಧನದಿಂದ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ಬಂಡಿ ಸಂಜಯ್ ಅವರನ್ನು ವಿನಾಕಾರಣ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ ಎಂದು ತೆಲಂಗಾಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುಜ್ಜುಲ ಪ್ರೇಮೇಂದ್ರ ರೆಡ್ಡಿ ಹೇಳಿದ್ದಾರೆ.

ಇನ್ನೊಂದೆಡೆ ಬಂಡಿ ಸಂಜಯ್ ಬಂಧನವನ್ನು ಬಿಜೆಪಿ ರಾಷ್ಟ್ರೀಯ ನಾಯಕತ್ವ ಗಂಭೀರವಾಗಿ ಪರಿಗಣಿಸಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದ ಬಿಆರ್ಎಸ್ ನಾಯಕತ್ವ ಬಂಡಿ ಸಂಜಯ್ ಅವರನ್ನು ಬಂಧಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಟ್ವೀಟ್ ಮಾಡಿದ್ದಾರೆ.

ಕೆಸಿಆರ್ ಹೇಳಿದಂತೆ ಪೊಲೀಸರು ಬೆನ್ನುಮೂಳೆಯಿಲ್ಲದೆ ವರ್ತಿಸುತ್ತಿದ್ದಾರೆ. ಪೇಪರ್ ಲೀಕೇಜ್ ಪ್ರಕರಣದಲ್ಲಿ ಸರ್ಕಾರದ ಅಸಮರ್ಥತೆ, ಅಕ್ರಮವನ್ನು ಮುಚ್ಚಿಹಾಕಲು ಬಂಡಿ ಸಂಜಯ್ ಬಂಧನವೇ ಸಾಕ್ಷಿ. ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿರುವುದಾಗಿ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!