ತೆಲಂಗಾಣ ಮುಖ್ಯಮಂತ್ರಿಯಾಗಿ ಇಂದು ರೇವಂತ್ ರೆಡ್ಡಿ ಪದಗ್ರಹಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತೆಲಂಗಾಣ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ರೇವಂತ್​ ರೆಡ್ಡಿ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹೈದರಾಬಾದ್​ನ ಎಲ್ ಬಿ ಸ್ಟೇಡಿಯಂನಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಧ್ಯಾಹ್ನ 1:04 ಗಂಟೆಗೆ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲ ಗಣ್ಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಸ್ವತಃ ರೇವಂತ್ ರೆಡ್ಡಿ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್​ ಭೇಟಿಯಾಗಿದ್ದರು. ಇಂಡಿಯಾ ಮೈತ್ರಿಕೂಟದ ನಾಯಕರಿಗೂ ಕರೆಯೋಲೆ ನೀಡಲಾಗಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!