ಹೊಸದಿಗಂತ ವರದಿ,ಬೀದರ್ :
ತೆಲಂಗಾಣಾ ರಾಜ್ಯದ ಸಂಗಾರೆಡ್ಡಿ ಜಿಲ್ಲಾ ಚುನಾವಣಾ ಪ್ರಭಾರಿಯಾಗಿರುವ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ತೆಲಂಗಾಣಾ ರಾಜ್ಯದ ಸಂಗಾರೆಡ್ಡಿ, ಜಹೀರಾಬಾದ, ನಾರಾಯಣಖೇಡ್, ಆಂದೋಲೆ ಹಾಗೂ ಪಟಂಚುರ್ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ ನಡೆಸಿದರು.
ಸಂಗಾರೆಡ್ಡಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ ಶಾಸಕರು, ಕೋರ್ ಕಮಿಟಿ, ತಾಲ್ಲೂಕು ಪದಾಧಿಗಳ ಸಭೆ ನಡೆಸಿ, ಮುಂಬರುವ ಚುಣಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಪಕ್ಷದ ಪದಾಧಿಕಾರಿಗಳು ಮಾಡಬೇಕಾದ ಕೆಲಸ ಕಾರ್ಯಗಳ ಕುರಿತು ಸಲಹೆ ಸೂಚನೆಗಳನ್ನು ನೀಡಿದರು. ಮಂಡಲ, ಮಹಾಶಕ್ತಿಕೇಂದ್ರ ಹಾಗೂ ಬುತ್ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖ ಪದಾಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸಿ ಮುಂದೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಮಾಡಬೇಕಿರುವ ತಯಾರಿಗಳ ಕುರಿತು ಚರ್ಚಿಸಿದರು.
ಬಿಜೆಪಿ ದೇಶದ ಅತಿ ದೊಡ್ಡ ಪಕ್ಷವಾಗಿದ್ದು, ಕಾರ್ಯತರ್ಕರಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಪ್ರಜಾಪ್ರಭುತ್ವದ ಆಶಯದಂತೆ ಕೆಲಸ ಮಾಡುವುದರಿಂದ ಈ ಪಕ್ಷ ಎಲ್ಲಕ್ಕಿಂತ ವಿಭಿನ್ನವೆನಿಸಿದೆ. ಇಂತಹ ಪಕ್ಷದಲ್ಲಿ ಕೆಲಸ ಮಾಡುವ ಎಲ್ಲ ಕಾರ್ಯಕರ್ತರು ಹೆಮ್ಮೆಯಿಂದ ಕೆಲಸ ಮಾಡಬೇಕು. ನಾಡಿನ ಪ್ರಗತಿಗಾಗಿ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು.
ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾದ ನಂತರ ಭಾರತವು ಹಿಂದೆಂದೂ ಕಾಣದ ರೀತಿಯಲ್ಲಿ ಪ್ರಗತಿ ಸಾಧಿಸುತ್ತಿದೆ. ಬಡ ಕಾರ್ಮಿಕರು, ರೈತರು, ಮಹಿಳೆಯರು ಹಾಗೂ ಯುವಜನತೆಯ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಬೇಕಿದೆ. ಕಾರ್ಯಕರ್ತರು, ಪದಾಧಿಕಾರಿಗಳು ಈ ದಿಶೆಯಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕೆಂದು ಹೇಳಿದರು.
ತೆಲಂಗಾಣಾ ರಾಜ್ಯದಲ್ಲಿ ಪ್ರಸ್ತುತ ಆಳ್ವಿಕೆ ನಡೆಸುತ್ತಿರುವ ಕೆ.ಚಂದ್ರಶೇಖರರಾವ್ ಅವರ ಆಡಳಿತ ಸಂಪೂರ್ಣ ವೈಫಲ್ಯಗಳಿಂದ ಕೂಡಿದೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಸಾಕಷ್ಟು ಹೆಚ್ಚಾಗಿದೆ. ಇವರ ಆಡಳಿತದ ಬಗ್ಗೆ ಜನ ಬೇಸರ ವ್ಯಕ್ತಪಡಿಸುತ್ತಿದ್ದು, ಹೊಸ ಸರ್ಕಾರ ತರಬೇಕೆನ್ನುವ ಚಿಂತನೆಯಲ್ಲಿದ್ದಾರೆ. ತೆಲಂಗಾಣಾ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಕಾಣಿಸಬೇಕೆಂದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕೆಂದು ಹೇಳಿದರು.
ತೆಲಂಗಾಣದಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರಲು ಉತ್ತಮ ಅವಕಾಶವಿದೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮನೆ-ಮನೆಗೆ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಬೇಕು. ಬೂತ್ ಸಮಿತಿಗಳನ್ನು ಇನ್ನಷ್ಟು ಗಟ್ಟಿಗೊಳಿಸಬೇಕು. ಪೇಜ್ ಪ್ರಮುಖರನ್ನು ಕೂಡಲೇ ನೇಮಿಸಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನರೇಂದ್ರ ರೆಡ್ಡಿ, ಮಾಜಿ ಸಚಿವ ಬಾಬು ಮೋಹನ, ಮಾಜಿ ಶಾಸಕ ನಂದೀಶ್ವರ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ, ಜಗನ್ನಾಥ, ಹಣಮಮಂತ ರೆಡ್ಡಿ, ರಾಮಶೆಟ್ಟಿ ಪನ್ನಾಳೆ ಹಾಗೂ ಇತರರಿದ್ದರು.