ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರಾಷ್ಟ್ರೀಯ ರಕ್ಷಣಾ ನಿಧಿಗೆ ಕಾಂಗ್ರೆಸ್ ಶಾಸಕರು ಮತ್ತು ಎಂಎಲ್‌ಸಿಗಳು ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡುವ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸ್ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರೊಂದಿಗೆ ಸಮಾಲೋಚಿಸಿ ದೇಣಿಗೆಯನ್ನು ಘೋಷಿಸಲಿದ್ದಾರೆ ಎಂದು ತಿಳಿಸಿದೆ.
ಇತರ ಪಕ್ಷಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಹ ಒಂದು ತಿಂಗಳ ವೇತನವನ್ನು ದೇಣಿಗೆ ನೀಡುವಂತೆ ಉಪ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.