ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್ ನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ನೀಡುವುದಾಗಿ ತೆಲಂಗಾಣ ಸರ್ಕಾರ ಘೋಷಿಸಿದೆ.
ನಾಂಪಲ್ಲಿಯ ಬಜಾರ್ ಘಾಟ್ ನಲ್ಲಿರುವ ರಾಸಾಯನಿಕ ಗೋದಾಮಿನಲ್ಲಿ ಇಂದು ಬೆಳಗ್ಗೆಅಗ್ನಿ ದುರಂತ ಸಂಭವಿದ್ದು, ಈವರೆಗೆ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ.ರಾಮರಾವ್, ಸಚಿವ ತಲಸಾನಿ ಶ್ರೀನಿವಾಸ ಯಾದವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೆಟಿಆರ್, ತನಿಖೆಯ ಬಳಿಕ ಘಟನೆಯ ನಿಖರ ಕಾರಣ ತಿಳಿದುಬರಲಿದೆ. ಸರ್ಕಾರವು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದೆ ಎಂದು ತಿಳಿಸಿದ್ದಾರೆ.