ಒಮಿಕ್ರಾನ್‌ ಭೀತಿ: ಮಾಸ್ಕ್ ಧರಿಸದಿದ್ದರೆ 1000 ರೂ. ದಂಡ ವಿಧಿಸಿದ ತೆಲಂಗಾಣ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೋವಿಡ್ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ.
ರಾಜ್ಯದಲ್ಲಿ ಸೋಂಕು ಹರಡದಂತೆ ತಡೆಯಲು ಜ.10ರವರೆಗೆ ಹೊಸ ನಿಯಮಗಳು ಜಾರಿಯಲ್ಲಿರಲಿದೆ. ರಾಜ್ಯ ಸರ್ಕಾರ ಧಾರ್ಮಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ರೀತಿಯ ರ್ಯಾಲಿಗಳು, ಸಾರ್ವಜನಿಕ- ಸಾಮೂಹಿಕ ಸಭೆಗಳಿಗೆ ನಿಷೇಧ ಹೇರಿದೆ.
ಇನ್ನುಳಿದಂತೆ ಸಾರ್ವಜನಿಕ ಸಾರಿಗೆ, ಅಂಗಡಿಗಳು, ಶಾಲೆ, ಶಿಕ್ಷಣ ಸಂಸ್ಥೆಗಳು, ಮಾಲ್‌ಗಳ ಎಲ್ಲಾ ಸಿಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್‌ ಧರಿಸದಿದ್ದರೆ 1 ಸಾವಿರ ರೂ. ದಂಡ ವಿಧಿಸಲು ಆದೇಶ ಹೊರಡಿಸಲಾಗಿದೆ.
ತೆಲಂಗಾಣದಲ್ಲಿ 6,82,215 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 4,029 ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!