ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಬಿಜೆಪಿ ಪಕ್ಷದ ಶಾಸಕ T ರಾಜಾ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ.
ತೆಲಂಗಾಣದ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದು, ಅವರ ರಾಜಿನಾಮೆ ವಿಚಾರ ತೆಲಂಗಾಣದಲ್ಲಿ ರಾಜಕೀಯವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಈ ಕುರಿತು ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಅವರಿಗೆ ಟಿ ರಾಜಾ ಸಿಂಗ್ ಪತ್ರ ಬರೆದು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.