ನೆರೆ ರಾಜ್ಯ ತೆಲಂಗಾಣದಲ್ಲೂ ಮಳೆಯ ಅಬ್ಬರ: ರೆಡ್‌ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತೆಲಂಗಾಣದಲ್ಲಿ ನೈಋತ್ಯ ಮಾನ್ಸೂನ್ ಮಾರುತಗಳು ಚುರುಕಾಗಿದ್ದು, ದಾಖಲೆ ಮಟ್ಟದ ಮಳೆಯಾಗಿದೆ ಎಂದು ಹೈದರಾಬಾದ್ ಹವಾಮಾನ ಇಲಾಖೆ ಅಧಿಕಾರಿ ಶ್ರಾವಣಿ ತಿಳಿಸಿದ್ದಾರೆ. ಮುಂದಿನ ನಾಲ್ಕು ದಿನಗಳಲ್ಲೂ ಕೂಡ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.

ಉತ್ತರ ತೆಲಂಗಾಣದ ಹಲವು ಜಿಲ್ಲೆಗಳಿಗೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಅಲರ್ಟ್ ಘೋಷಿಸಲಾಗಿದ್ದು, ನಿಜಾಮಾಬಾದ್ ನಲ್ಲಿ ದಾಖಲೆ ಮಟ್ಟದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ನಿನ್ನೆಯಿಂದ ಹೈದರಾಬಾದ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!