ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ನಾಗರ ಕರ್ನೂಲ್ನ ಶ್ರೀಶೈಲಂ ಎಡದಂಡೆ ಕಾಲುವೆ (ಎಸ್‌ಎಲ್‌ಬಿಸಿ) ಸುರಂಗದಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ನಾಗರ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ರಕ್ಷಣಾ ತಂಡ, ಕಾರ್ಯಾಚರಣೆ ನಡೆಸುತ್ತಿರುವಾಗ ಲೋಕೋ ಟ್ರ್ಯಾಕ್ ಬಳಿ ಮಾನವ ಅವಶೇಷದ ಕುರುಹುಗಳನ್ನು ಪತ್ತೆ ಮಾಡಿತು.ಅಗೆಯುತ್ತಿರುವ ಸಂದರ್ಭದಲ್ಲಿ ರಕ್ಷಣಾ ಸಿಬ್ಬಂದಿಗೆ ದುರ್ವಾಸನೆ ಬರುತ್ತಿರುವುದು ಗಮನಕ್ಕೆ ಬಂತು. ಇಲ್ಲಿನ ಡಿ1 ಮತ್ತು ಡಿ2 ಹೊರತುಪಡಿಸಿ ಇತರ ಸ್ಥಳಗಳಲ್ಲಿ ಅಗೆಯುವಾಗ ಸಿಬ್ಬಂದಿಗೆ ಮೃತದೇಹ ಪತ್ತೆಯಾಗಿದೆ.
ಫೆಬ್ರವರಿ 22 ರಂದು ಸಂಭವಿಸಿದ ಎಸ್‌ಎಲ್‌ಬಿಸಿ ಸುರಂಗ ದುರಂತದಲ್ಲಿ ಎಂಟು ಕಾರ್ಮಿಕರು ಸಿಲುಕಿದ್ದರು. ಅವರಲ್ಲಿ ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ. ಉಳಿದ ಆರು ಮಂದಿ ಪತ್ತೆಗೆ ರಕ್ಷಣಾ ತಂಡ ಕಾರ್ಯಾಚರಣೆ ಮುಂದುವರೆಸಿದೆ.
ಪಂಜಾಬ್‌ನ ಟನಲ್ ಬೋರಿಂಗ್ ಮೆಷಿನ್ (ಟಿಬಿಎಂ) ಆಪರೇಟರ್ ಗುರುಪ್ರೀತ್ ಸಿಂಗ್ ಅವರ ಮೃತ ದೇಹವನ್ನು ಮಾರ್ಚ್ 9 ರಂದು ವಶಪಡಿಸಿಕೊಳ್ಳಲಾಗಿತ್ತು.ಇದೀಗ ಉಳಿದವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.