ತೆಲಂಗಾಣ, ಉತ್ತರಾಖಂಡ ಬಿಜೆಪಿಗೆ ರಾಜ್ಯಾಧ್ಯಕ್ಷರ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹಿರಿಯ ಎಬಿವಿಪಿ ನಾಯಕ, ಮಾಜಿ ಎಂಎಲ್​ಸಿ ಎನ್.ರಾಮಚಂದ್ರ​ ರಾವ್ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ.ಕಿಶನ್​ ರೆಡ್ಡಿ ಅವರ ಬಳಿಕ ರಾಮಚಂದ್ರ​ ರಾವ್​ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಶೋಭಾ ಕರಂದ್ಲಾಜೆ ನೇಮಕ ಪತ್ರ ನೀಡಿದರು.

ಉತ್ತರಾಖಂಡ ಬಿಜೆಪಿ ಅಧ್ಯಕ್ಷರಾಗಿ ಮಹೇಂದ್ರ ಭಟ್
ಉತ್ತರಾಖಂಡ್​ ಬಿಜೆಪಿ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ ಮಹೇಂದ್ರ ಭಟ್​ ಮರು ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ, ಹಿರಿಯ ನಾಯಕರು ಹಾಗೂ ರಾಜ್ಯ ಉಸ್ತುವಾರಿ ದುಷ್ಯಂತ್​ ಗೌತಮ್​ ಉಪಸ್ಥಿತಿಯಲ್ಲಿ ಪಕ್ಷದ ಕೇಂದ್ರ ವೀಕ್ಷಕ ಹರ್ಷ ಮಲ್ಹೋತ್ರಾ ಭಟ್​ ಪುನರ್​ ಆಯ್ಕೆಯನ್ನು ಘೋಷಿಸಿದರು.

ಮೊದಲ ಬಾರಿಗೆ ಉತ್ತರಾಖಂಡದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಅಧ್ಯಕ್ಷರೊಬ್ಬರು ಆಯ್ಕೆಯಾಗಿದ್ದಾರೆ. ಚುನಾವಣೆಗೆ ಭಟ್​ ಒಬ್ಬರೇ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!