ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೌಚಾಲಯದಲ್ಲಿ ರೇಪ್ ಮಾಡಿದ್ದಾರೆ ಎಂದು ಯುವತಿಯೊಬ್ಬರು ಆರೋಪಿಸಿದ ನಂತರ ಪೊಲೀಸರು ಹಿಂದಿ ಕಿರುತೆರೆ ನಟ ಆಶಿಶ್ ಕಪೂರ್‌ನ್ನು ಬಂಧಿಸಿದ್ದಾರೆ.
ಆಗಸ್ಟ್ ಎರಡನೇ ವಾರದಲ್ಲಿ ದೆಹಲಿಯಲ್ಲಿ ಒಂದು ಮನೆಯಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಮನೆಯ ಪಾರ್ಟಿಯಲ್ಲಿ ನಟ ವಾಶ್ ರೂಂನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಪುಣೆಯ ಆಶಿಶ್ ಕಪೂರ್ ಅವರನ್ನು ಬಂಧಿಸಿದ್ದಾರೆ.
ಸಂತ್ರಸ್ತೆ ಮತ್ತು ಆಶಿಶ್ ಕಪೂರ್ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್ ಮೂಲಕ ಭೇಟಿಯಾದರು. ಇದಾದ ನಂತರ, ಈ ಪರಿಚಯ ಸ್ನೇಹಕ್ಕೆ ತಿರುಗಿತು. ನಂತರ, ಆಶಿಶ್ ಸಂತ್ರಸ್ತೆಯನ್ನು ಮನೆ ಪಾರ್ಟಿಗೆ ಆಹ್ವಾನಿಸಿದರು. ಈ ಪ್ರಕರಣದಲ್ಲಿ, ಪೊಲೀಸರು ಆಶಿಶ್ ಕಪೂರ್, ಅವರ ಸ್ನೇಹಿತ, ಸ್ನೇಹಿತನ ಪತ್ನಿ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.