ಕಿರುತೆರೆಯ ಖ್ಯಾತನಟ ಗುರುಚರಣ್ ಸಿಂಗ್ ನಾಪತ್ತೆ: ಉದ್ದೇಶಿತ ಕೈವಾಡದ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಿರುತೆರೆಯ ಕಲಾವಿದ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದು, ಸಿನಿ ರಂಗದಲ್ಲಿ ಆತಂಕ ಮೂಡಿದೆ.
ಗುರುಚರಣ್‌ ತಂದೆ ತನ್ನ ಮಗನನ್ನು ಹುಡುಕಿಕೊಡುವಂತೆ ಅವರ ಕುಟುಂಬ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದೆ. ತನ್ನ ಮಗ ಕಾಣೆಯಾಗಿರೋದಕ್ಕೆ ಉದ್ದೇಶಿತ ಕೈವಾಡದ ಶಂಕೆಯನ್ನು ಅವರು ವ್ಯಕ್ತ ಪಡಿಸಿದ್ದಾರೆ.

ಚಿತ್ರೀಕರಣಕ್ಕೆ ತೆರಳುತ್ತೇನೆಂದು ಮನೆಯಲ್ಲಿ ಹೇಳಿ ಮನೆಯಿಂದ ಹೊರಟ ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ
ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದಾರೆ. ದೆಹಲಿಯಿಂದ ಮುಂಬೈಗೆ ತೆರಳಿದ್ದ ಅವರು ಏರ್ಪೋರ್ಟ್ನಿಂದ ಕಾಣೆಯಾಗಿದ್ದಾರೆ ಎಂದು ಅವರ ತಂದೆ ಹರ್ಜಿತ್ ಸಿಂಗ್ ದೂರು ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!