Sunday, October 5, 2025

ತೆಲುಗು ನಟ, ಶಾಸಕ ನಂದಮೂರಿ ಬಾಲಕೃಷ್ಣ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲುಗು ನಟ, ಶಾಸಕ ನಂದಮೂರಿ ಬಾಲಕೃಷ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು ,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಬಾಲಕೃಷ್ಣ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದ್ದು, ಬಾಲಯ್ಯ ಅವರ ಆರೋಗ್ಯದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡುತ್ತಿದ್ದಾರೆ.

ಆಂಧ್ರ ಪ್ರದೇಶ ಸರ್ಕಾರ ‘ಸೂಪರ್ ಸಿಕ್ಸ್’ ಹೆಸರಿನ ಕಾರ್ಯಕ್ರಮ ಮಾಡುತ್ತಿದ್ದು, ಆ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಅವರು ಗೈರಾಗಿದ್ದರು. ಈ ಬಗ್ಗೆ ಮಾತನಾಡಿದ ಸಚಿವ ಪಯ್ಯವುಲ ಕೇಶವ ಅವರು, ‘ಬಾಲಕೃಷ್ಣ ಅವರಿಗೆ ಆರೋಗ್ಯ ಹದಗೆಟ್ಟಿದೆ ಹಾಗಾಗಿ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ’ ಎಂದಿದ್ದಾರೆ. ಆದರೆ ಬಾಲಯ್ಯ ಅವರಿಗೆ ಏನಾಗಿದೆ? ಯಾವ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂಬ ಬಗ್ಗೆ ಅವರು ಮಾಹಿತಿ ನೀಡಿಲ್ಲ.