ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪೂಜೆ ಸಲ್ಲಿಸಿದ ತೆಲುಗು ನಟ ವಿಜಯ್ ದೇವರಕೊಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಲೈಗರ್​ ಸಿನಿಮಾ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿದೆ. ಈ ಸಂದರ್ಭದಲ್ಲಿ ವಿಜಯ್ ದೇವರಕೊಂಡ ಅವರು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆಗಿದ್ದರು.

ಪರಭಾಷೆಯ ಯಾವುದೇ ನಟರು ನಗರಕ್ಕೆ ಆಗಮಿಸಿದಾಗ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್​ ಸಮಾಧಿಗೆ ಭೇಟಿ ನೀಡುವರು.
ಲೈಗರ್​ ಸಿನಿಮಾ ಆಗಸ್ಟ್​ 25ರಂದು ತೆರೆಗೆ ಬರಲಿದೆ. ನಿರ್ದೇಶಕ ಪುರಿ ಜಗನ್ನಾಥ್​ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಬಾಕ್ಸರ್​ ಪಾತ್ರದಲ್ಲಿ ವಿಜಯ್​ ದೇವರಕೊಂಡ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅವರ ತಾಯಿ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಿದ್ದಾರೆ. ವಿಶ್ವ ವಿಖ್ಯಾತ ಬಾಕ್ಸರ್​ ಮೈಕ್​ ಟೈಸನ್​ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!