ರಾಜಧಾನಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ ಏರಿಕೆಯಗಿದ್ದು, ಬಿಸಿಲ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆಯಿಂದ ಬೇಗೆಯ ವಾತಾವರಣ ಉಂಟಾಗಿದ್ದು, ಗಾಳಿಯಲ್ಲೂ ನೀರಿನ ತೇವಾಂಶವಿಲ್ಲದೆ ಕೆಲವೆಡೆ ಬಿಸಿ ಗಾಳಿ ಬೀಸಲಾರಂಭಿಸಿವೆ.

ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 32 ಡಿ.ಸೆ. ದಾಖಲಾಗಿದ್ದು, ಇದು ವಾಡಿಕೆಗಿಂತ 3.2 ಡಿ.ಸೆ. ಹೆಚ್ಚಿನ ತಾಪಮಾನವಾಗಿದೆ.

ದಾವಣೆಗೆರೆಯಲ್ಲಿ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಮತ್ತು ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಾಗಲಕೋಟೆ ಮತ್ತು ರಾಯಚೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗದಲ್ಲಿ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!