WEATHER | ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಉಷ್ಣಾಂಶ ಅಧಿಕ, ಆರೋಗ್ಯ ಜಾಗ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ನಿನ್ನೆಯಷ್ಟೇ ಮಳೆಯ ಸಿಂಚನವಾಗಿದೆ. ಆದರೆ ಈ ಎರಡು ಭಾಗದಲ್ಲಿ ಇನ್ನೆರಡು ದಿನ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.