ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಪ್ರತಿಷ್ಠೆ ನಡೆಲಿದೆ.
ಈಗಾಗಲೇ ಮಂದಿರ ನಿರ್ಮಾಣದ ಬಹುತೇಕ ಕಾರ್ಯ ಮುಗಿದಿದ್ದು, ಮುಕ್ತಾಯ ಹಂತದ ಕೆಲಸಗಳು ಬರದಿಂದ ಸಾಗುತ್ತಿವೆ. ಈ ಮಧ್ಯೆ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿಯ ಪ್ರತಿಷ್ಠಾಪನೆ ಮಾಡುವ ಗರ್ಭಗುಡಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರಾಮಲಲ್ಲಾನ ಪ್ರತಿಷ್ಠಾಪನೆ ಮಾಡಲಾಗುವ ಗರ್ಭಗುಡಿಯೂ ನಿರ್ಮಾಣ ಕಾರ್ಯ ಮುಗಿದಿದ್ದು, ಬಹುತೇಕ ಸಿದ್ಧವಾಗಿದೆ. ರಾಮಲಲ್ಲಾನ ಗರ್ಭಗುಡಿ ಕೆಲ ಫೋಟೋಗಳು ನಿಮಗಾಗಿ ಎಂದು ಬರೆದುಕೊಂಡಿದ್ದಾರೆ.
ನಿನ್ನೆಯಷ್ಟೇ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶ್ರೀರಾಮ ಜನ್ಮಭೂಮಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ವೀಡಿಯೋವೊಂದನ್ನು ರಿಲೀಸ್ ಮಾಡಿತ್ತು.
ಮಂದಿರ ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ರಾಮ ಜನ್ಮಭೂಮಿಯ ದೇಗುಲದ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗಿರುವ ಫೋಟೋಗಳಲ್ಲಿ ದೇಗುಲದೊಳಗಿನ ಸುಂದರ ಕೆತ್ತನೆಯನ್ನು ಕೂಡ ಕಾಣಬಹುದಾಗಿದೆ.
प्रभु श्री रामलला का गर्भ गृह स्थान लगभग तैयार है। हाल ही में लाइटिंग-फिटिंग का कार्य भी पूर्ण कर लिया गया है। आपके साथ कुछ छायाचित्र साझा कर रहा हूँ। pic.twitter.com/yX56Z2uCyx
— Champat Rai (@ChampatRaiVHP) December 9, 2023
ಪ್ರಧಾನಿ ಮೋದಿ ಮುಂದಿನ ವರ್ಷದ ಮುಂದಿನ ತಿಂಗಳು ಅಂದರೆ ಜನವರಿ 22ರಂದು ಉದ್ಘಾಟನೆ ಮಾಡಲಿದ್ದಾರೆ. ಜನವರಿ 16ರಿಂದಲೇ ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿ ವಿಧಾನಗಳು ಆರಂಭವಾಗಲಿವೆ.