ದಾವಣಗೆರೆಯಲ್ಲಿ ಟೆಂಪೊ ಟೈರ್ ಸ್ಫೋಟ: ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆಯಲ್ಲಿ ಬೊಲೆರೊ ಟೆಂಪೊ ವಾಹನದ ಟೈಯರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.

ಮೃತರು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಸಿಂಗರಾಜನಹಳ್ಳಿ ನಿವಾಸಿಗಳಾಗಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ. ತಡರಾತ್ರಿ ಅಪಘಾತ ಸಂಭವಿಸಿದೆ. ಎಲ್ಲರೂ ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿನಕಾಯಿ ತುಂಬಿಕೊಂಡು ತಮ್ಮೂರಿಗೆ ವಾಪಾಸ್ ಹೋಗುವಾಗ ಅಪಘಾತ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!