ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಉಧಮ್‌ಪುರ ಜಿಲ್ಲೆಯ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿರುವ ಗರ್ನೈ ಚೆಕ್‌ಪೋಸ್ಟ್‌ನಲ್ಲಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಒಂಬತ್ತು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳನ್ನು ಉಧಮ್‌ಪುರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಜಿಲ್ಲಾಡಳಿತ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.