ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಗಿರುವ ನಟ ದರ್ಶನ್ ಗೆ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಫೆಬ್ರವರಿ 20ರವರೆಗೆ ಮೈಸೂರಿನಲ್ಲಿ ಇರಲು ಅನುಮತಿ ನೀಡಿದೆ.
ಅನಾರೋಗ್ಯದಿಂದ ಬಳಲುತ್ತಿರುವ ಅವರು ವೈದ್ಯರನ್ನು ಭೇಟಿಯಾಗುವ ಸಂಬಂಧ ಮೈಸೂರಿಗೆ ತೆರಳಬೇಕಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಫೆಬ್ರವರಿ 20ರವರೆಗೆ ಮೈಸೂರಿಗೆ ತೆರಳಲು, ವೈದ್ಯರನ್ನು ಭೇಟಿಯಾಗಲು ಅನುಮತಿ ನೀಡಿದೆ. ಈ ಮೂಲಕ ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ.