ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹತ್ತು ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್ (Double-decker electric Buses) ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ.
ಈ 10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಚರಿಸಲಿವೆ. ನಗರದಲ್ಲಿ ಮತ್ತೆ ಡಬಲ್ ಡೆಕ್ಕರ್ ಬಸ್‌ಗಳು ಸದ್ದು ಮಾಡಲಿವೆ. ಡಬಲ್ ಡೆಕ್ಕರ್ ಬಸ್‌ಗಳಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪೂರ್ಣವಾಗಲಿದೆ ಎಂದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ
ಡಬಲ್ ಡೆಕ್ಕರ್ ಬಸ್‌ಗಳಿಗೆ ಅಂಡರ್‌ಪಾಸ್ ಮತ್ತು ಇತರ ಅಡೆತಡೆಗಳಲ್ಲಿ ಸಂಚರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇದಕ್ಕಾಗಿ ಈಗಾಗಲೇ ಐದುಮಾರ್ಗ ರೂಪಿಸಲಾಗಿದೆ. ಈ ಡಬಲ್ ಡೆಕ್ಕರ್ ಬಸ್‌ಗಳಿಗೆ ಬಿಎಂಟಿಸಿ ಬಸ್ನ ಬಣ್ಣವನ್ನೇ ಅಂತಿಮಗೊಳಿಸಲಾಗಿದೆ. ಆದರೆ ಡಬಲ್ ಡೆಕ್ಕರ್ ಬಸ್ ವಿನ್ಯಾಸದ ಬಗ್ಗೆ ಚರ್ಚೆ ನಡೆದಿದೆ. ಜಪಾನ್ ಡಬಲ್ ಡೆಕ್ಕರ್ ಬಸ್ ಮಾದರಿಯನ್ನು ನನ್ನ ಆಪ್ತರು ಕಳಿಸಿದ್ದು, ಅದನ್ನು ಸಹ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕಳಿಸಿದ್ದೇನೆ ಎಂದಿದ್ದರು.ನಿರ್ವಹಿಸುತ್ತಿವೆ.