ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ತೆಂಡುಲ್ಕರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾರತದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲನ್ಯಾಸ ನೆರೆವೇರಿಸಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ವಿಶೇಷ ಉಡುಗೊರೆ ನೀಡಿದ್ದಾರೆ. ಮೋದಿಗೆ ಟೀಂ ಇಂಡಿಯಾ ಜರ್ಸಿಯನ್ನು ಉಡುಗೊರೆಯಾಗಿ ನೀಡಲಾಗಿದೆ.
ಮೋದಿಗೆ ಉಡುಗೊರೆ ನೀಡಿದ ಜರ್ಸಿ ಹಿಂಭಾಗದಲ್ಲಿ ನಮೋ ಎಂದು ಬರೆಯಲಾಗಿದೆ. ಈ ವಿಶೇಷ ಉಡುಗೊರೆ ಸ್ವೀಕರಿಸಿದ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ರವಿ ಶಾಸ್ತ್ರಿ, ಸುನಿಲ್ ಗವಾಸ್ಕರ್, ದಿಲೀಪ್ ವೆಂಗರ್ಕರ್ ಸೇರಿದಂತೆ ಹಲವು ಕ್ರಿಕೆಟ್ ದಿಗ್ಗಜರು ಈ ವಾರಣಾಸಿ ಕ್ರಿಕೆಟ್ ಕ್ರೀಡಾಂಗಣ ಶಿಲನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಾರಣಾಸಿ ಕ್ರೀಡಾಂಗಣದಲ್ಲಿ ಹಲವು ವಿಶೇಷತೆಗಳಿವೆ. ಪ್ರಮುಖವಾಗಿ ಇದರ ವಿನ್ಯಾಸ. ಶಿವನ ತ್ರಿಶೂಲ, ಶಿವನ ಡಮರುಗ, ಶಿವನ ತಲೆಯ ಮೇಲಿನ ಚಂದ್ರನ ಆಕೃತಿಯಲ್ಲಿ ಈ ಕ್ರೀಡಾಂಗಣ ವಿನ್ಯಾಸಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!