Sunday, July 3, 2022

Latest Posts

ತೆಂಕುತಿಟ್ಟು ಯಕ್ಷಗಾನದ ಭಾಗವತ ಪದ್ಯಾಣ ಗಣಪತಿ ಭಟ್ ವಿಧಿವಶ

ಹೊಸದಿಗಂತ ವರದಿ, ಮಂಗಳೂರು:

ತೆಂಕುತಿಟ್ಟು ಯಕ್ಷಗಾನದ ಹಿರಿಯ ಪ್ರಸಿದ್ದ ಭಾಗವತ ಪದ್ಯಾಣ ಗಣಪತಿ ಭಟ್ ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸುಳ್ಯ ತಾಲೂಕು ಕಲ್ಮಡ್ಕದ ಸ್ವಗೃಹದಲ್ಲಿ ನಿಧನ ಹೊಂದಿದರು. ತೆಂಕುತಿಟ್ಟಿನ ಖ್ಯಾತ ಭಾಗವತರಾಗಿದ್ದ ಅವರು ಕಳೆದ ನಾಲ್ಕು ದಶಕಕ್ಕೂ ಹೆಚ್ಚು ಕಾಲ ರಂಗಸ್ಥಳದಲ್ಲಿ ತನ್ನ ಕಂಠಸಿರಿಯ ಮೂಲಕ ವಿಜೃಂಭಿಸಿದ್ದರು. ಸುರತ್ಕಲ್ ಮೇಳದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದ ಅವರು, ಹೊಸನಗರ, ಹನುಮಗಿರಿ ಮೇಳದಲ್ಲಿ ಪ್ರಧಾನ ಭಾಗವತರಾಗಿ ಮೆರೆದಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಗಾಯಗೊಂಡ ಬಳಿಕ ಯಕ್ಷರಂಗದಿಂದ ವಿಮುಖರಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಪದ್ಯಾಣ ಶೈಲಿಯ ಹಾಡುಗಾರಿಕೆ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಗಣಪತಿ ಭಟ್ ಇನ್ನು ನೆನಪು ಮಾತ್ರ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss