ಮಣಿಪುರದಲ್ಲಿ ಉದ್ವಿಗ್ನ: ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದ ಪೊಲೀಸ್ ಮುಖ್ಯಸ್ಥರನ್ನು ಪದಚ್ಯುತಗೊಳಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಈ ವೇಳೆ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದೆ.

ಇದರಿಂದ ಮಣಿಪುರ ಸರ್ಕಾರ ಮಂಗಳವಾರ ಐದು ದಿನಗಳ ಕಾಲ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದೆ. ಸರ್ಕಾರವು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಮತ್ತು ತೌಬಲ್‌ನಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ.

ಹಿಂಸಾಚಾರ ಭುಗಿಲೆದ್ದಿದ್ದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಅತ್ಯಾಧುನಿಕ ಡ್ರೋನ್ ಮತ್ತು ರಾಕೆಟ್ ದಾಳಿಯ ನಂತರ ಪ್ರತಿಭಟನೆ ಭುಗಿಲೆದ್ದಿತು. ಮಣಿಪುರದಲ್ಲಿ ಡ್ರೋನ್ ಮತ್ತು ರಾಕೆಟ್ ದಾಳಿ ಸೇರಿದಂತೆ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದು, 12 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೆಪ್ಟೆಂಬರ್ 10ರ ಮಧ್ಯಾಹ್ನ 3 ರಿಂದ ಸೆಪ್ಟೆಂಬರ್ 15 ಸಂಜೆ 3 ರವರೆಗೆ ಜಾರಿಗೆ ಬರುವಂತೆ ಐದು ದಿನಗಳ ಕಾಲ ಮಣಿಪುರ ರಾಜ್ಯದ ಪ್ರಾದೇಶಿಕ ವ್ಯಾಪ್ತಿಯಲ್ಲಿ ಲೀಸ್ ಲೈನ್‌ಗಳು, ವಿಎಸ್‌ಎಟಿಗಳು, ಬ್ರಾಡ್‌ಬ್ಯಾಂಡ್‌ಗಳು ಮತ್ತು ವಿಪಿಎನ್ ಸೇವೆಗಳನ್ನು ಒಳಗೊಂಡಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಂದು ಬೆಳಗ್ಗೆ ಪ್ರತಿಭಟನಾಕಾರರು ರಾಜಭವನದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದಾಗ ವಿದ್ಯಾರ್ಥಿಗಳು ಮತ್ತು ಮಹಿಳಾ ಪ್ರತಿಭಟನಾಕಾರರು ಅವರೊಂದಿಗೆ ಘರ್ಷಣೆ ನಡೆಸಿದ್ದರಿಂದ ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಅವರು ಡಿಜಿಪಿ ಮತ್ತು ಮಣಿಪುರ ಸರ್ಕಾರದ ಭದ್ರತಾ ಸಲಹೆಗಾರರನ್ನು ವಜಾಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಆರೋಗ್ಯ, ಇಂಜಿನಿಯರಿಂಗ್ ವಿಭಾಗ, ಮುನ್ಸಿಪಲ್ ಸಂಸ್ಥೆಗಳು, ವಿದ್ಯುತ್ (MSPCL/MSPDCL), ಪೆಟ್ರೋಲ್ ಪಂಪ್‌ಗಳು, ನ್ಯಾಯಾಲಯಗಳ ಕಾರ್ಯನಿರ್ವಹಣೆ, ವಿಮಾನ ಪ್ರಯಾಣಿಕರು ಮತ್ತು ಮಾಧ್ಯಮಗಳ ಓಡಾಟ, ಅಗತ್ಯ ಸೇವೆಗಳಲ್ಲಿ ತೊಡಗಿಸಿಕೊಂಡಿರುವವರ ಮುಕ್ತ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!