ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ: ಐದು ದಿನ ಇಂಟರ್‌ನೆಟ್‌ ಸೇವೆ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ ಪೊಲೀಸ್ ಕಾನ್‌ಸ್ಟೆಬಲ್ ಅವರನ್ನು ಅಮಾನತು ಮಾಡಿದ ಸರ್ಕಾರದ ಕ್ರಮವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸದಂತೆ ತಡೆಯಲು ಮಣಿಪುರದ ಚುರಚಾಂದಪುರ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಉದ್ರಿಕ್ತರು ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಕಚೇರಿಗಳನ್ನು ಧ್ವಂಸಗೊಳಿಸಿದ್ದಾರೆ. ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗಳು (ಸಿಎಪಿಎಫ್) ಬಳಸುವ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿನ ತ್ರಿವರ್ಣ ಧ್ವಜವನ್ನು ಕೆಳಕ್ಕೆ ಇಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಘರ್ಷದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯುವನ್ನು ಪ್ರಯೋಗಿಸಿದರು.

ಬಂದೂಕುಧಾರಿಗಳೊಂದಿಗೆ ಇರುವ ವಿಡಿಯೊ ಹರಿದಾಡಿದ ಕಾರಣಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಸೇವೆಯಿಂದ ಅಮಾನತು ಮಾಡಿರುವುದು ನ್ಯಾಯಯೋಚಿತವಲ್ಲ. ಅವರನ್ನು ಮತ್ತೆ ಸೇವೆಗೆ ನಿಯೋಜಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.

ಹಿಂಸಾಚಾರದ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವುದರಿಂದ ಕಾನೂನು, ಸುವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಜನರ ಪ್ರಾಣಕ್ಕೂ ಸಂಚಕಾರ ಎದುರಾಗಬಹುದು. ಗಾಳಿಸುದ್ದಿಗಳು ಹರಿದಾಡುವುದರಿಂದ ಕೋಮು ಸೌಹಾರ್ದದ ಮೇಲೂ ಪರಿಣಾಮ ಬೀರಲಿದೆ’ ಎಂದು ಇಂಟರ್‌ನೆಟ್‌ ಸೇವೆ ಸ್ಥಗಿತ ಕುರಿತು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!