ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ: ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಆನ್‌ಲೈನ್ ಡೆಸ್ಕ್

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮೃತದೇಹದ ಮೆರವಣಿಗೆ ವೇಳೆ ಉಂಟಾದ ಕಲ್ಲು ತೂರಾಟದಿಂದ ನಗರವು ಬೂದಿ ಮುಚ್ಚಿದ ಕೆಂಡದಂತಿದ್ದು, ಈ ಹಿನ್ನೆಲೆ ನಗರ ವ್ಯಾಪ್ತಿಯ ಎಲ್ಲ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ.
ಇಲ್ಲಿನ ರವಿವರ್ಮ ಬೀದಿ, ಸಿದ್ದಯ್ಯ ರಸ್ತೆಯಲ್ಲಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದ್ದರು. ಮೆರವಣಿಗೆಯಲ್ಲಿ ಸಚಿವ ಕೆ. ಎಸ್​ ಈಶ್ವರಪ್ಪ ಹಾಗೂ ಸಂಸದ ರಾಘವೇಂದ್ರ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!