ಹೊಸದಿಗಂತ ವರದಿ, ಮಡಿಕೇರಿ:
ಉಕ್ರೇನ್ ದೇಶದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಉಕ್ರೇನ್ ದೇಶಕ್ಕೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ತೆರಳಿ ನೆಲೆಸಿರುವ ಕೊಡಗು ಜಿಲ್ಲೆಗೆ ಸಂಬಂಧಿಸಿದ ಭಾರತೀಯ ನಾಗರಿಕರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಅಂತಹವರ ಮಾಹಿತಿಯನ್ನು ಸಂಬಂಧಿಸಿದವರು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ಸಂ.08272-221077, 1077, 08272-221099 ಅಥವಾ ಜಿಲ್ಲಾ ವಿಪತ್ತು ಪರಿಣಿತ ಅನನ್ಯ ವಾಸುದೇವ ದೂ.ಸಂ.8892494703 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.