ನಿಜಾಮ್ ಕಾಲೇಜು ಬಳಿ ಉದ್ರಿಕ್ತ ವಾತಾವರಣ: ಬಿಗಿ ಪೊಲೀಸ್‌ ಬಂದೋಬಸ್ತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್ ನಿಜಾಮ್ ಕಾಲೇಜಿನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಹಾಸ್ಟೆಲ್ ಸೀಟುಗಳನ್ನು ತಮಗೆ ಮಂಜೂರು ಮಾಡುವಂತೆ ಆಗ್ರಹಿಸಿ ಪದವಿ ವಿದ್ಯಾರ್ಥಿಗಳು ನಡೆಸುತ್ತಿರುವ ಧರಣಿ ಶುಕ್ರವಾರವೂ ಮುಂದುವರಿದಿದೆ.

ಸಮಸ್ಯೆ ಬಗೆಹರಿಯುವಂತೆ ನೋಡಿಕೊಳ್ಳುವಂತೆ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳಿಗೆ ಮಂತ್ರಿ ಕೆಟಿಆರ್‌ ಸೂಚಿಸಿದರು. ಅಧಿಕಾರಿಗಳು ಗುರುವಾರ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿ, ಹಾಸ್ಟೆಲ್‌ನಲ್ಲಿ ಶೇ.50ರಷ್ಟು ಸೀಟುಗಳನ್ನು ಪಿಜಿ ವಿದ್ಯಾರ್ಥಿಗಳಿಗೆ ಹಾಗೂ ಶೇ.50ರಷ್ಟು ಪದವಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಇದಕ್ಕೆ ಒಪ್ಪದ ಪದವಿ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು. ಹಾಸ್ಟೆಲ್ ಅನ್ನು ಸಂಪೂರ್ಣವಾಗಿ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಿಡಬೇಕು ಎಂದು ಒತ್ತಾಯಿಸಿದರು. ಇದು ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ನಡುವಿನ ಒಮ್ಮತ ಸಾಧ್ಯವಾಗದ ಕಾರಣ ವಿದ್ಯಾರ್ಥಿಗಳ ಧರಣಿ ಮುಂದುವರಿದಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ. ಧರಣಿ ನಿಲ್ಲಿಸದಿದ್ದರೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮಾತುಕತೆಗೆ ಕರೆದು ಬೆದರಿಕೆ ಹಾಕುತ್ತಾರೆ ಅಂದರೆ ಏನರ್ಥ? ನಾವು ಬಂದಿರುವುದು ವಿದ್ಯಾಭ್ಯಾಸ ಮಾಡುವುದಕ್ಕೆ ಇವರು ಮಾಡುವ ಕೆಲಸಕ್ಕೆ ನಾವು ನಮ್ಮ ಓದು ಬಿಟ್ಟು ಮನೆಗೆ ಹೋಗಬೇಕಾ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಸಚಿವ ಕೆಟಿಆರ್ ಆದೇಶ ಜಾರಿ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಜಾಮ್ ಕಾಲೇಜಿನಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ನಿಯೋಜನೆಯಿಂದಾಗಿ ನಿಜಾಮ್ ಕಾಲೇಜಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!