ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದೀಗ ಮುಡಾ ಅಕ್ರಮ ಭೂ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸಿಎ ಸೈಟ್ ಮಂಜೂರಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.
ಸಿಎ ಸೈಟ್ ಮಂಜೂರಾತಿಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ರಾಜ್ಯಪಾಲ ತಾವರ್ ಚಂದ್ ಅವರು ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸಿದ್ಧಾರ್ಥ ಟ್ರಸ್ಟ್‌ಗೆ ಕೆಐಎ ಡಿಬಿ ಮಂಜೂರು ಮಾಡಿರುವ ಜಮೀನಿಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.