ಭಾರತ-ಪಾಕ್‌ ನಡುವೆ ಉದ್ವಿಗ್ನತೆ: ಮಂತ್ರಾಲಯದಿಂದ ದೇಶದ ರಕ್ಷಣಾ ನಿಧಿಗೆ 25 ಲಕ್ಷ ದೇಣಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಘೋಷಣೆ ಮಾಡಿದ್ದಾರೆ.

ಶ್ರೀಗಳ 13ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ದೇಶದ ವಿದ್ಯಮಾನಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಪಹಲ್ಗಾಮ್ ದಾಳಿಯಲ್ಲಿ ಮಡಿದವರಿಗೆ ಹಾಗೂ ಆಪರೇಷನ್ ಸಿಂದೂರ್ ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧರಿಗೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸಿದರು.

ದೇಶದಲ್ಲಿ ಅಶಾಂತಿ ಉಂಟಾಗಿದೆ. ತಾತ್ಕಾಲಿಕವಾಗಿ ಯುದ್ಧ ವಿರಾಮ ದೊರಕಿದೆ. ರಾತ್ರಿ ಹಗಲು, ಮಳೆ, ಬಿಸಿಲು ಎನ್ನದೇ ಪ್ರಾಣವನ್ನೂ ಲೆಕ್ಕಿಸದೇ ದೇಶದ ರಕ್ಷಣೆಗಾಗಿ ನಮ್ಮೆಲ್ಲ ಯೋಧರು ಶ್ರಮಿಸುತ್ತಿದ್ದಾರೆ. ಜಾಗೃತರಾಗಿ, ವಿವೇಚನಾ ಪೂರ್ವಕವಾಗಿ ದೇಶದ ಸಮಗ್ರತೆಗೆ, ರಕ್ಷಣೆ, ಭದ್ರತೆಗೆ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ದೇಶದಲ್ಲಿ ಅಶಾಂತಿ ಪರಸ್ಥಿತಿ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!