ಬೆಂಗಳೂರಿನಲ್ಲಿ ಹತ್ತನೇ ವರ್ಷದ ಬಿ ಗುಡ್ ಡು ಗುಡ್ ಅಭಿಯಾನಕ್ಕೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಸಮರ್ಥ ಭಾರತ ವತಿಯಿಂದ ಆಯೋಜಿಸಲಾಗಿರುವ 10ನೇ ವರ್ಷದ ಬಿ ಗುಡ್ ಡು ಗುಡ್ ಅಭಿಯಾನದ ಉದ್ಘಾಟನೆ ಕಾರ್ಯಕ್ರಮ ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಗೋಮತಿದೇವಿ, ಬೆಂಗಳೂರು ಸಿಟಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಹಾಗೂ ಮಾಜಿ ಕುಲಪತಿ‌ಗಳಾದ ಪ್ರೊ. ನರಸಿಂಹಮೂರ್ತಿ ಹಾಗೂ ಸಮರ್ಥ ಭಾರತದ ಮಾರ್ಗದರ್ಶಕ ನಾ. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು‌.

ರಾಜ್ಯವ್ಯಾಪಿಯಾಗಿ ಜನವರಿ 12 ರಿಂದ 26ರವರೆಗೆ ಅಭಿಯಾನ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!