July 4, 2026
Saturday, July 4, 2026
spot_img

ಘೋರ ದುರಂತ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಸ್ಥಳದಲ್ಲೇ ಸಾ*ವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇಂದು ಶನಿವಾರ ಅತ್ಯಂತ ಮನಕಲಕುವ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ದೊಡ್ಡ ಕೊಂಬೆಯೊಂದು ಏಕಾಏಕಿ ಮುರಿದು ಬಿದ್ದ ಪರಿಣಾಮ 26 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ.

ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ನಿವಾಸಿ ಸಂತೋಷ್ (26) ಮೃತ ದುರ್ದೈವಿ. ಘಟನೆಯಲ್ಲಿ ಗಂಭೀರವಾಗಿ ಗಾಯಾಗೊಂಡ ವೀರಭದ್ರನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾರ್ಗ ಮಧ್ಯೆಯೇ ದುರಂತ

ಸಂತೋಷ್ ಹಾಗೂ ವೀರಭದ್ರ ಇಬ್ಬರೂ ಮೀನು ಹಿಡಿಯಲು ಬೇಕಾದ ಉಕ್ಕಡವನ್ನು ಬೈಕ್‌ನಲ್ಲಿ ಹೊತ್ತುಕೊಂಡು ಚೋರಡಿಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ತಾರಿಗ ಗ್ರಾಮಕ್ಕೆ ಹೊರಟಿದ್ದರು. ಇವರು ತಾರಿಗ ರಸ್ತೆಯಲ್ಲಿ ಸಾಗುತ್ತಿದ್ದಾಗ, ರಸ್ತೆ ಬದಿಯಲ್ಲಿದ್ದ ಸುಮಾರು 50 ಅಡಿ ಎತ್ತರದ ಒಣಮರದ ಬೃಹತ್ ರೆಂಬೆಯೊಂದು ಏಕಾಏಕಿ ಇವರ ಬೈಕ್ ಮೇಲೆ ಮುರಿದು ಬಿದ್ದಿದೆ. ಮರದ ರೆಂಬೆ ಬಿದ್ದ ರಭಸಕ್ಕೆ ಬೈಕ್ ಸಂಪೂರ್ಣ ನಿಯಂತ್ರಣ ತಪ್ಪಿ ರಸ್ತೆಗೆ ಅಪ್ಪಳಿಸಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:

ಸ್ಥಳಕ್ಕೆ ಪೊಲೀಸರ ಭೇಟಿ

 ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಸಂತೋಷ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಘಟನೆ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.  

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !