ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು-ಕೇರಳ ಗಡಿಯ ಕಾಸರಗೋಡಿನ ಉಪ್ಪಳದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಉಪ್ಪಳ ಬ್ರಿಡ್ಜ್ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದಾರೆ. ಕಾಸರಗೋಡು ಪೈವಳಿಕೆ ಬಾಯಿಕಟ್ಚೆಯ ನಿವಾಸಿ ಜನಾರ್ದನ, ವರುಣ್, ಕೃಷ್ಣ ಮೃತರು.
ಕಾಸರಗೋಡು ತಲಪಾಡಿ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಗಾಗಿ ಅಲ್ಲಲ್ಲಿ ತಾತ್ಕಾಲಿಕ ತಡೆಗೋಡೆ ಹಾಗೂ ಡಿವೈಡರ್ ನಿರ್ಮಾಣ ಮಾಡಲಾಗಿತ್ತು. ಡಿವೈಡರ್ ಗೊತ್ತಾಗದೆ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.